ನಮ್ಮೂರಿಗೇನು ಕಲಾಂ ಅವರು ಬರಲಿಲ್ಲ. ಆದರೆ ನಮ್ಮವರೇ ಆಗಿದ್ದರು ಕಲಾಂ ಅವರು. ವಿದ್ಯಾರ್ಥಿಗಳ ಮನದಲ್ಲಿ ಬೇರೂರಿದ್ದಾರೆ. ಹೊಸತನಕ್ಕೆ ಹಾತೋರೆಯುವ ಈ ಹೊಸ ಕುಡಿಗಳು ಕಂಡಾಗ ಏನೆಲ್ಲ ಅವಕಾಶಗಳನ್ನು ಕಲ್ಪಿಸಿಕೊಡ ಬೇಕೆಂದು ನನ್ನ ಮನ ತುಡಿಯುತ್ತದೆ. ಕಲಾಂ ಅವರಿಗೊಂದು ಸಲಾಮ್ ಮಾಡುತ್ತಾ, ಮಕ್ಕಳಿಗಾಗಿಯೇ ಮತ್ತಷ್ಟು ಕೊಟ್ಟುಕೊಳ್ಳೋಣ. ಕಲಾಂ ಅವರಂತೆ. ಹೊಸ ಭವಿಷ್ಯಕ್ಕೆ ಹೊಸ ಹಾದಿಯನ್ನು ಸರಿಯಾಗಿಡೋಣ.
ಬುಧವಾರ, ಜುಲೈ 29, 2015
ಮಂಗಳವಾರ, ಜುಲೈ 21, 2015
ಬುಧವಾರ, ಜುಲೈ 15, 2015
ಒಂದು ಹಣತೆ : ಒಂದು ಸಣ್ಣ ಕಥೆ!
![]() |
Girish T P |
ಒಂದು ದಿನ ಒಂದು ಮನೆಯ ಹಣತೆಯಲ್ಲಿ ಒಂದು ಚಿಕ್ಕ ಭಿನ್ನಾಭಿಪ್ರಾಯ ಶುರುವಾಯಿತು.
ಹಣತೆ ” ನನ್ನಿಂದ ದೀಪ ಉರಿಯುತ್ತಿದೆ ಆ ಬೆಳಕು ನನ್ನದು ” ಎಂದು ಹೇಳಿತು.
ಇದನ್ನು ಕೇಳಿದ ಹಣತೆಯಲ್ಲಿದ್ದ ಎಣ್ಣೆ ” ನಾನು ಆ ದೀಪಕ್ಕೆ ಜೀವಾಳ.ನಾನೇ ಇರದಿದ್ದರೆ ದೀಪವೂ ಇಲ್ಲ, ಬೆಳಕೂ ಇಲ್ಲ ಅದಕ್ಕಾಗಿ ಆ ಬೆಳಕು ನನಗೆ ಸೇರಿದ್ದು” ಎಂದಿತು.
ಇದನ್ನು ಕೇಳಿದ ಬತ್ತಿ ” Hello! ನಾನು ಉರಿಯುತ್ತಿರುವದಿಂದಲೇ ದೀಪ ಉರಿಯುತ್ತಿದೆ logically ಬೆಳಕು ನನ್ನದು “ಎಂದಿತು.
ಈ ಕಚ್ಚಾಟವನ್ನು ಸೂಕ್ಷ್ಮದಿಂದಲೇ ನೋಡುತಿದ್ದ ಗಾಳಿ ” ನಾನು ಇಲ್ಲದೇ ದೀಪವು ಉರಿಯಲ್ಲ , ನಾನು ಹೆಚ್ಚಾದರೆ ದೀಪ ಆರಿಹೋಗುತ್ತದೆ ಆದ್ದರಿಂದ ಬೆಳಕು ನನ್ನದು” ಎಂದು ವಾದಿಸಿತು.
ನಾನು ನನ್ನಿಂದ ಎಂಬ ಕಚ್ಚಾಟದಲ್ಲಿ ಹಣತೆ ಹೊಡೆದು ಹೋಯಿತು. ಎಣ್ಣೆ ಹರಿದು ಹೋಯಿತು. ಬತ್ತಿಗೆ ಎಣ್ಣೆಯಿಲ್ಲದೆ ಕುಗ್ಗಿ ಹೋಯಿತು. ಗಾಳಿ ಜೋರಾಗಿ ಬೀಸಿ ಉರಿಯುತ್ತಿದ್ದ ದೀಪ ಆರಿಹೋಯಿತು !
-------------------------
ಎಲ್ಲವೂ ಒಟ್ಟಾಗಿ ಇರುತ್ತಿದ್ದರೆ ಆ ದೀಪದ ಭರವಸೆಯ ಬೆಳಕು ಎಲ್ಲರ ಪಾಲಾಗಿತ್ತು. ” ಅಹಂ ಭಾವನೆಯಿಂದ ಅಂಧಕಾರವೇ ಹೊರತು ಬೆಳಕಿನ ಸಾನಿಧ್ಯವಿಲ್ಲ ”
ಆ ಭರವಸೆಯ ಬೆಳಕು ನಿಮ್ಮದಾಗಲಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)